ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ 2000ನೇ ಇಸವಿಯಲ್ಲಿ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವು ಒಂದು ವರ್ಷ ಪ್ರೊಬೇಷನ್ ಅವಧಿ ವಿಧಿಸಿದೆ.
ಮೇಧಾ ಅವರು ಅಪರಾಧಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯ ಐದು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ಪಾಟ್ಕರ್ ಅವರ ವಯಸ್ಸು, ಅಪರಾಧದ ತೀವ್ರತೆ ಮತ್ತು ಈ ಹಿಂದೆ ಯಾವುದೇ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗದೇ ಇರುವುದನ್ನು ಪರಿಗಣಿಸಿ ಪ್ರೊಬೇಷನ್ ಅವಧಿ ವಿಧಿಸಿರುವುದಾಗಿ ತಿಳಿಸಿದೆ.
ಇನ್ನು ನ್ಯಾಯಾಲಯವು ಪಾಟ್ಕರ್ ಅವರಿಗೆ ವಿಧಿಸಲಾಗಿದ್ದ ದಂಡದ ಮೊತ್ತವನ್ನು ₹10 ಲಕ್ಷದಿಂದ ₹1 ಲಕ್ಷಕ್ಕೆ ಇಳಿಸಿದ್ದಾರೆ. ಪ್ರೊಬೇಷನ್ ಅವಧಿಯಲ್ಲಿ ಮೇಧಾ ಅವರು ಒಂದು ವರ್ಷ ನಿಯುಕ್ತ ಅಧಿಕಾರಿಯ ನಿರೀಕ್ಷಣೆಯಲ್ಲಿರುವರು. ಈ ಅವಧಿಯಲ್ಲಿ ಅವರ ನಡವಳಿಕೆ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಕೆಯಾಗುವ ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುತ್ತದೆ.