ರಹಾನೆ, ರಿಂಕು ಹೋರಾಟಕ್ಕೆ ಸಿಗದ ಫಲ: ಲಕ್ನೋ ವಿರುದ್ಧ ಕೆಕೆಆರ್ ಗೆ 4 ರನ್​ಗಳ ವೀರೋಚಿತ ಸೋಲು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 4 ರನ್​ಗಳ ರೋಚಕ ಜಯ ಸಾಧಿಸಿದೆ.

ಲಕ್ನೋ ನೀಡಿದ್ದ 239ರನ್​ಗಳ ಗುರಿಯನ್ನ ಬೆನ್ನಟ್ಟಿದ ಕೆಕೆಆರ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 234 ರನ್​ಗಳಿಸಿತು.

ನಾಯಕ ರಹಾನೆ (61), ವೆಂಕಟೇಶ್ ಅಯ್ಯರ್ (45) ಹಾಗೂ ರಿಂಕು ಸಿಂಗ್​ (ಅಜೇಯ 38) ರನ್ ಗಳಿಸಿ ಗೆಲುವಿಗಾಗಿ ಹೋರಾಟ ನಡೆಸಿದರೂ ಗುರಿ ತಲುಪುವಲ್ಲಿ ವಿಫಲವಾದರು.

ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ, 3 ವಿಕೆಟ್ ಕಳೆದುಕೊಂಡು 238 ರನ್​ಗಳ ಬೃಹತ್ ಮೊತ್ತ ದಾಖಲಿಸಿತ್ತು. ಇದನ್ನು ಬೆನ್ನತ್ತಿದ್ದ ಕೆಕೆಆರ್ , ನಿಗದಿತ ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 234 ರನ್‌ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು. ಕೆಕೆಆರ್ ಪರ ರಹಾನೆ 35 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 61 ರನ್ ಗಳಿಸಿದರೆ, ರಿಂಕು 15 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ ಅಜೇಯ 38 ರನ್ ಗಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!