ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಸಬರಮತಿ ಆಶ್ರಮಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
64 ವರ್ಷದ ಹಿರಿಯ ನಾಯಕ ಪಿ ಚಿದಂಬರಂ ಬಿಸಿಲಿನ ಬೇಗೆಯಿಂದ ಕಾರ್ಯಕ್ರಮದ ಆರಂಭದಲ್ಲೇ ಅಸ್ವಸ್ಥರಾಗಿದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಚಿದಂಬರಂ ಆರೋಗ್ಯದಲ್ಲಿ ಏರುಪೇರಾಗಿದೆ. ಪ್ರಜ್ಞೆ ತಪ್ಪಿದ ಚಿದಂಬರಂ ಕುಸಿದು ಬಿದ್ದಿದ್ದಾರೆ.
ಘಟನೆ ಕುರಿತು ಪುತ್ರ ಕಾರ್ತಿ ಚಿದಂಬಂರ ಮಾಹಿತಿ ನೀಡಿ, ವಿಪರೀತ ಬಿಸಿಲಿನಿಂದ ಪಿ ಚಿದರಂಬರಂ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅವರನ್ನು ಝೈಡಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತಂದೆ ವೈದ್ಯರ ನಿಗಾದಲ್ಲಿದ್ದಾರೆ ಎಂದು ಹೇಳಿದ್ದಾರೆ.