ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ವಾರ ಸಂಸತ್ನಲ್ಲಿ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ 2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕುವುದರೊಂದಿಗೆ ಕಾನೂನಾಗಿ ಮಾರ್ಪಟ್ಟಿದೆ. ಮಂಗಳವಾರ (ಏ. 8) ಕಾಯ್ದೆ ದೇಶಾದ್ಯಂತ ಜಾರಿಗೆ ಬಂದಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಲೋಕಸಭೆ ಮತ್ತು ರಾಜ್ಯಸಭೆ ಕ್ರಮವಾಗಿ ಏ. 3 ಮತ್ತು ಏ. 4ರಂದು ಮಧ್ಯರಾತ್ರಿಯ ನಂತರ ಮಸೂದೆಯನ್ನು ಅಂಗೀಕರಿಸಿದವು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಸ್ತಾವಿತ ಕಾನೂನಿಗೆ ಏ. 5ರಂದು ಅಂಕಿತ ಹಾಕಿದರು.
ಬಿಜೆಪಿ ನೇತೃತ್ವದ ಎನ್ಡಿಎ ಮಸೂದೆಯನ್ನು ಬೆಂಬಲಿಸಿದರೆ, ವಿಪಕ್ಷಗಳ ಇಂಡಿಯಾ ಒಕ್ಕೂಟ ಅದನ್ನು ವಿರೋಧಿಸಿದೆ.
ಇದೀಗ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವ ಮೂಲಕ ದೇಶಾದ್ಯಂತ ಜಾರಿಯಾಗಿದೆ.