ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ತಂಡದ ಕ್ವಿಂಟನ್ ಡಿ ಕಾಕ್ ತಮ್ಮ ಟಿ20 ವೃತ್ತಿಜೀವನದ ವೇಗದ ಶತಕ ಬಾರಿಸಿದ್ದಾರೆ.
ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯವನ್ನು ದಕ್ಷಿಣ ಆಫ್ರಿಕಾ 7 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಮಾತ್ರವಲ್ಲದೆ ರನ್ ಚೇಸ್‌ನಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿತು.
ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 221 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ಮಾರ್ಕ್ರಾಮ್ ಔಟಾದ ನಂತರ ಬಂದ ರಿಕಲ್ಟನ್, ಡಿ ಕಾಕ್‌ಗೆ ಉತ್ತಮ ಬೆಂಬಲ ನೀಡಿದರು.
ಕ್ವಿಂಟನ್ ಡಿ ಕಾಕ್ 49 ಎಸೆತಗಳಲ್ಲಿ 10 ಸಿಕ್ಸರ್‌ಗಳು ಮತ್ತು 6 ಬೌಂಡರಿಗಳನ್ನು ಒಳಗೊಂಡಂತೆ 115 ರನ್ ಗಳಿಸಿದರು. 234.69 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಡಿ ಕಾಕ್ 43 ಎಸೆತಗಳಲ್ಲಿ ತಮ್ಮ ವೃತ್ತಿಜೀವನದ ಅತ್ಯಂತ ವೇಗದ ಶತಕ ಬಾರಿಸಿದರು. ಈ ಇನ್ನಿಂಗ್ಸ್‌ನಲ್ಲಿ ಡಿ ಕಾಕ್, ರಿಕಲ್ಟನ್ ಅವರೊಂದಿಗೆ ಎರಡನೇ ವಿಕೆಟ್‌ಗೆ 152 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.
ಒಂದಡೆ ಡಿ ಕಾಕ್ ದಾಖಲೆಯ ಶತಕ ಬಾರಿಸಿದರೆ, ಇತ್ತ ರಯಾನ್ ತಮ್ಮ ವೃತ್ತಿಜೀವನದ ಅತಿ ದೊಡ್ಡ ಇನ್ನಿಂಗ್ಸ್ ಆಡಿದರು. ಕೊನೆಯವರೆಗೂ ಅಜೇಯರಾಗಿ ಉಳಿದ ರಯಾನ್ 36 ಎಸೆತಗಳಲ್ಲಿ 213.88 ಸ್ಟ್ರೈಕ್ ರೇಟ್‌ನಲ್ಲಿ ಒಂಬತ್ತು ಬೌಂಡರಿಗಳು ಮತ್ತು ಮೂರು ಸಿಕ್ಸರ್‌ಗಳು ಸೇರಿದಂತೆ 77 ರನ್ ಬಾರಿಸಿದರು.



