ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ್ದು, ಇದರಿಂದ ಸುಮಾರು ಎರಡು ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೆಂಗಳೂರಿನ ಹೊಸೂರು ರಸ್ತೆಗೆ ತೆರಳುವ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಕಾರೊಂದು ದಿಢೀರ್ ಬ್ರೇಕ್ ಹಾಕಿದ ಪರಿಣಾಮ, ಅದರ ಹಿಂದೆ ಸಾಗಿಸುತ್ತಿದ್ದ ಮೂರು ಕಾರುಗಳು ಡಿಕ್ಕಿಯಾಗಿವೆ.
ಸರಣಿ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.