ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಸೋಮವಾರಪೇಟೆ, ಕಳಸ, ಪುತ್ತೂರು, ಹಿರೇಕೆರೂರು, ನಾಪೋಕ್ಲು, ಕಾರ್ಕಳ, ಕದ್ರಾ, ವಿಜಯಪುರ, ಕೊಪ್ಪ, ಕಮ್ಮರಡಿ, ಭಾಗಮಂಡಲ, ಮದ್ದೂರಿನಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.