ಹೊಸದಿಗಂತ ವರದಿ,ವಿಜಯಪುರ:
ಸಚಿವ ಶಿವಾನಂದ ಪಾಟೀಲ ಅವರ ವಿರುದ್ಧ ಅವಹೇಳನಕಾರಿ, ಮಾನಹಾನಿಕರ ಹಾಗೂ ನಿಂದನಾತ್ಮಕ ಹೇಳಿಕೆಗಳನ್ನು ನೀಡದಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಬೆಂಗಳೂರು ನಗರದ ೨೭ನೇ ಹೆಚ್ಚುವರಿ ನಗರ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಶರು ತಡೆಯಾಜ್ಞೆ ಆದೇಶ ನೀಡಿದ್ದಾರೆ.
ಸುಳ್ಳು, ಆಧಾರರಹಿತ, ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡುವ ಮೂಲಕ ತೇಜೋವಧೆ ಮಾಡಲು ಯತ್ನಿಸಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಯತ್ನಾಳ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಿದ್ದು, ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಶರು, ಸಚಿವ ಶಿವಾನಂದ ಪಾಟೀಲ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಯತ್ನಾಳಗೆ ನಿರ್ಬಂಧ ವಿಸಿ, ಆದೇಶ ಮಾಡಿದ್ದಾರೆ.
ಹಲವು ಟಿವಿ ಸಂದರ್ಶನಗಳಲ್ಲಿ ನನ್ನ ವಿರುದ್ಧ ಯತ್ನಾಳ ಸುಳ್ಳು ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದು, ನನ್ನ ಘನತೆಗೆ ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ ಅವರು ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿದ್ದರು. ಈ ದೂರು ದಾಖಲಿಸಿದ ಬಳೊಕವೂ ಯತ್ನಾಳ ಮತ್ತೆ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಮತ್ತೊಂದು ದೂರು ದಾಖಲಿಸಿದ್ದರು.
ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ನಿಂದನಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶಿವಾನಂದ ಪಾಟೀಲ ಅವರು ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ನಂತರ ವಿಜಯಪುರದಲ್ಲಿ ಪ್ರತಿಭಟನಾ ಸಭೆಯೊಂದರಲ್ಲಿಯೂ ಯತ್ನಾಳ ಅವರು ಮತ್ತೆ ನಿಂದನಾತ್ಮಕ ಹೇಳಿಕೆ ನೀಡುವುದನ್ನು ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಶಿವಾನಂದ ಪಾಟೀಲ ಅವರು ಮತ್ತೊಂದು ದೂರು ದಾಖಲು ಮಾಡಿದ್ದರು.
ಈ ಎರಡೂ ದೂರಗಳನ್ನು ಆಧರಿಸಿ ಯತ್ನಾಳ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಅವರು ಬೆಂಗಳೂರು ನಗರದ ೪೨ ನೇ ಹೆಚ್ಚುವರಿ ಮುಖ್ಯ ಮಹಾನಗರ ಮ್ಯಾಜಿಸ್ಟ್ರೇಟ್ ಮುಂದೆ ವಿಚಾರಣೆಗೆ ಒಳಗಾಗಲಿದ್ದಾರೆ.



