ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರದ ಪ್ರಮುಖ ಪ್ರವಾಸಿ ತಾಣವಾಗಿರುವ ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡುವ ಸರ್ಕಾರದ ಪ್ರಸ್ತಾವನೆಗೆ ಪರಿಸರ ಸಚಿವಾಲಯದಿಂದ ಷರತ್ತುಬದ್ಧ ಅನುಮೋದನೆ ದೊರೆತಿದೆ.
ಮೇ ತಿಂಗಳಿನಲ್ಲಿಯೇ ರೋಪ್ ವೇ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಸರ್ಕಾರ ಮುಂದಾಗಿದೆ ದೆ. ಇದರೊಂದಿಗೆ, ದೀರ್ಘ ಅವಧಿಯಿಂದ ನನೆಗುದಿಯಲ್ಲಿದ್ದ ಯೋಜನೆ ಚುರುಕು ಪಡೆಯಲಿದೆ.
ರಾಜ್ಯ ಪ್ರವಾಸೋದ್ಯಮ ಇಲಾಖೆಯು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (MoEFCC) ಅಂತಿಮ ಅನುಮೋದನೆಗಾಗಿ ಕಾಯುತ್ತಿದ್ದು, ಮೇ ಒಳಗಾಗಿ ಅಂತಿಮ ಅನುಮೋದನೆ ಪಡೆಯುವ ನಿರೀಕ್ಷೆಯಲ್ಲಿದೆ.
ಕನಿಷ್ಠ ಪರಿಸರ ಅಡಚಣೆಯನ್ನು ಖಾತರಿಪಡಿಸಿಕೊಂಡ ನಂತರ ಅರಣ್ಯ ಇಲಾಖೆ ಕಟ್ಟುನಿಟ್ಟಾದ ಷರತ್ತುಗಳನ್ನು ವಿಧಿಸಿದ ನಂತರ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದದ ಪರಿವೇಶ್ ಪೋರ್ಟಲ್ ಮೂಲಕ ಅನುಮೋದನೆ ನೀಡಲಾಗಿದೆ.
ಷರತ್ತುಗಳು ಏನೇನು?
‘ನಂದಿ ಸ್ಟೇಟ್ ಫಾರೆಸ್ಟ್ ಲಿಮಿಟ್ಸ್’ ವ್ಯಾಪ್ತಿಯಲ್ಲಿ ಬರುವ ರೋಪ್ ವೇ ಯೋಜನಾ ಸ್ಥಳದಲ್ಲಿ, ಮರ ಕಡಿಯುವುದನ್ನು ನಿಷೇಧಿಸುವುದು (ನೀಲಗಿರಿ ಮರವನ್ನು ಹೊರತುಪಡಿಸಿ), ಬ್ಲಾಸ್ಟಿಂಗ್ ಅಥವಾ ಡ್ರಿಲ್ಲಿಂಗ್ ನಿಷೇಧಿಸುವುದು ಮತ್ತು ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುಬೇಕೆಂಬ ಷರತ್ತುಗಳನ್ನು ವಿಧಿಸಲಾಗಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.