ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯಾ ರಹಾನೆ ಮೊದಲು ಬೌಲಿಂಗ್ ಆಯ್ದುಕೊಂಡರು. ಇತ್ತ ಬರೋಬ್ಬರಿ 2 ವರ್ಷಗಳ ಬಳಿಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಚೆನ್ನೈ ಆಡಿರುವ 5 ಪಂದ್ಯಗಳಲ್ಲಿ 1 ರಲ್ಲಿ ಮಾತ್ರ ಗೆದ್ದಿದೆ. ಮತ್ತೊಂದೆಡೆ ಕೋಲ್ಕತಾ ನೈಟ್ ರೈಡರ್ಸ್ ಕೂಡ ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು ಕೇವಲ 2 ಪಂದ್ಯಗಳನ್ನು ಮಾತ್ರ ಗೆದ್ದಿದೆ.
ಚೆನ್ನೈ ಸೂಪರ್ ಕಿಂಗ್ಸ್
ರಚಿನ್ ರವೀಂದ್ರ, ಡೆವೊನ್ ಕಾನ್ವೆ, ರಾಹುಲ್ ತ್ರಿಪಾಠಿ, ವಿಜಯ್ ಶಂಕರ್, ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್/ನಾಯಕ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.
ಕೋಲ್ಕತ್ತಾ ನೈಟ್ ರೈಡರ್ಸ್
ಕ್ವಿಂಟನ್ ಡಿ ಕಾಕ್, ಸುನಿಲ್ ನರೈನ್, ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಮೊಯಿನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ.