ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ನ ಪ್ರಸಿದ್ಧ ನಟ ಮೋಹನ್ ಬಾಬು ಅವರು ನಿರ್ಮಿಸಿರುವ ‘ಕಣ್ಣಪ್ಪ’ ಸಿನಿಮಾದ ರಿಲೀಸ್ ಡೇಟ್ ಘೋಷಿಸಿದೆ. ಜೂನ್ 27ರಂದು ವಿಶ್ವಾದ್ಯಂತ ಈ ಸಿನಿಮಾ ಬಿಡುಗಡೆ ಆಗಲಿದೆ.
ಈ ಸಿನಿಮಾ ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ. ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ಕಣ್ಣಪ್ಪ’ ಸಿನಿಮಾದ ಬಿಡುಗಡೆ ದಿನಾಂಕದ ಪೋಸ್ಟರ್ ಅನಾವರಣ ಮಾಡಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದಾಗ ಮೋಹನ್ ಬಾಬು, ವಿಷ್ಣು ಮಂಚು, ಪ್ರಭುದೇವ, ವಿನಯ್ ಮಹೇಶ್ವರಿ ಅವರು ಉಪಸ್ಥಿತರಿದ್ದರು. ಈ ಸಿನಿಮಾ ಯಶಸ್ವಿ ಆಗಲಿ ಎಂದು ಯೋಗಿ ಆದಿತ್ಯನಾಥ್ ಹಾರೈಸಿದ್ದಾರೆ.