January 30, 2026
Friday, January 30, 2026
spot_img

ವೆನೆಜುವೆಲಾ ಹಂಗಾಮಿ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಾತನಾಡಿದ್ದಾರೆ.

ಅಮೆರಿಕದೊಂದಿಗಿನ ಉದ್ವಿಗ್ನತೆಯ ನಡುವೆಯೂ ಸಂಬಂಧಗಳನ್ನ ಗಟ್ಟಿಗೊಳಿಸಲು ಮತ್ತು ಮುಂದಿನ ವರ್ಷಗಳಲ್ಲಿ ಅವುಗಳನ್ನ ಹೊಸ ಎತ್ತರಕ್ಕೆ ಕೊಂಡೊಯ್ಯಲು ಪರಸ್ಪರ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪ್ರಧಾನಿ ಮೋದಿ, “ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಮಾತನಾಡಿದೆ. ಮುಂದಿನ ವರ್ಷಗಳಲ್ಲಿ ಭಾರತ-ವೆನೆಜುವೆಲಾ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಹಂಚಿಕೆಯ ದೃಷ್ಟಿಕೋನದೊಂದಿಗೆ, ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು ಮತ್ತು ವಿಸ್ತರಿಸಲು ನಾವು ಒಪ್ಪಿಕೊಂಡಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !