ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಕ್ಕಿ ಕೌಶಲ್ ಅಭಿನಯದ ಛಾವಾ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಹಣ ಗಳಿಸಿದೆ. ಇದಾದ ನಂತರ ಇದೀಗ ಸಿನಿಮಾ ನೆಟ್ಫ್ಲಿಕ್ಸ್ಗೆ ಎಂಟ್ರಿ ಕೊಟ್ಟಿದ್ದು, ಸಾಕಷ್ಟು ಮೆಚ್ಚುಗೆ ಪಡೆದಿದೆ.
ಫೆಬ್ರವರಿ 14ರಂದು ಬಿಡುಗಡೆಯಾದ ಈ ಚಿತ್ರ ವಿಶ್ವಾದ್ಯಂತ 700 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಬಾಲಿವುಡ್ ಬಹುಬೇಡಿಕೆ ನಟ ವಿಕ್ಕಿ ಕೌಶಲ್ ಅವರ ವೃತ್ತಿಜೀವನದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆ ಸೃಷ್ಟಿಸಿದೆ. ಸೂಪರ್ ಹಿಟ್ ಸಿನಿಮಾಗಳನ್ನೇ ಕೊಡುತ್ತಿದ್ದ ನ್ಯಾಷನಲ್ ಕ್ರಶ್ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರಿಗೆ ಚಿತ್ರ ಮತ್ತೊಂದು ದೊಡ್ಡ ಯಶಸ್ಸು ತಂದುಕೊಟ್ಟಿತು.
‘ಛಾವಾ’, ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಛತ್ರಪತಿ ಸಂಭಾಜಿ ಮಹಾರಾಜರ ಜೀವನವನ್ನು ಆಧರಿಸಿದೆ. ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವಿಕ್ಕಿ ಕೌಶಲ್ ನಟಿಸಿದ್ದಾರೆ. ವಿಕ್ಕಿ ಅವರ ಅದ್ಭುತ ನಟನೆಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಅವರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಸಂಭಾಜಿ ಕಥೆಯಲ್ಲಿ ಅಕ್ಷಯ್ ಖನ್ನಾ ಔರಂಗಜೇಬನ ಪಾತ್ರವನ್ನು ನಿರ್ವಹಿಸಿದ್ದಾರೆ.