ಅತಿಥಿಗೃಹದಲ್ಲಿ ಮಹಿಳೆ ಸ್ನಾನ ಮಾಡುವ ವೀಡಿಯೋ ಚಿತ್ರೀಕರಣ: ಹೊಟೇಲ್ ಸಿಬ್ಬಂದಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಅತಿಥಿಗೃಹದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇರೆಗೆ 25 ವರ್ಷದ ಹೋಟೆಲ್ ಸಿಬ್ಬಂದಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಅತಿಥಿ ಗೃಹದಲ್ಲಿ ಮುಂಜಾನೆ 6 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಹೊಟೆಲ್ ಸಿಬ್ಬಂದಿಯೇ ಮಹಿಳೆ ಸ್ನಾನ ಮಾಡುತ್ತಿದ್ದಾಗ ತನ್ನ ಮೊಬೈಲ್ ನಲ್ಲಿ ಆಕೆಯ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ಹೇಳಲಾಗಿದೆ.ಈ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅಯೋಧ್ಯೆ ಪೊಲೀಸರು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಿವಾಸಿ 25 ವರ್ಷದ ಸೌರಭ್ ತಿವಾರಿ ಎಂಬಾತನನ್ನು ಬಂಧಿಸಿದ್ದಾರೆ.

ಈತ ಇದೇ ರಾಜಾ ಅತಿಥಿ ಗೃಹದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈತ ವಿಡಿಯೋ ಚಿತ್ರೀಕರಿಸುತ್ತಿದ್ದಾಗಲೇ ಹೊಟೆಲ್ ಇತರೆ ಅತಿಥಿಗಳು ಈತನನ್ನು ಸಾಕ್ಷ್ಯ ಸಮೇತ ಹಿಡಿದಿದ್ದಾರೆ ಎಂದು ಹೇಳಲಾಗಿದೆ.

ಪ್ರಸ್ತುತ ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ಈತನ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಪರಿಶೀಲಿಸಿದಾಗ ಅದರಲ್ಲಿ ಇತರೆ ಮಹಿಳೆಯರ ಹಲವು ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!