ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದು ಮೂವರು ಸಾವನ್ನಪ್ಪಿದ್ದು, ಈ ಕಾರಣದಿಂದ ಕೋಲ್ಕತ್ತಾ ಹೈಕೋರ್ಟ್ ಕೇಂದ್ರ ಪಡೆ ನಿಯೋಜನೆಗೆ ಆದೇಶ ನೀಡಿದೆ.
ಬಿಜೆಪಿ ನಾಯಕ ಶುಭೇಂದು ಅವರು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ, ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಪಡೆಗಳ ನಿಯೋಜನೆಗೆ ಒತ್ತಾಯಿಸಿದ್ದರು. ಕೋಲ್ಕತ್ತಾ ಹೈಕೋರ್ಟ್‌ನ ವಿಶೇಷ ಪೀಠವು ಈ ಬೇಡಿಕೆಯನ್ನು ಅಂಗೀಕರಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ.
ಮುರ್ಷಿದಾಬಾದ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.