ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ವೀರನಪಾಳ್ಯದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೂಲಿ ಕಾರ್ಮಿಕರು ವಾಸವಿದ್ದ 40ಕ್ಕೂ ಹೆಚ್ಚು ಶೆಡ್‍ಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೂಲಿ ಕಾರ್ಮಿಕರು ಸುಮಾರು 50 ಶೆಡ್ ನಿರ್ಮಿಸಿಕೊಂಡಿದ್ದರು. ಮೊದಲಿಗೆ ಒಂದು ಶೆಡ್‍ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಬೇರೆ ಶೆಡ್‍ಗಳಿಗೂ ಬೆಂಕಿ ಹರಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಜನ ಅಲ್ಲಿಂದ ಹೊರಗೆ ಓಡಿ ಬಂದಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.