ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿಂದು ಹಗುರ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಹೊರತುಪಡಿಸಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ವರದಿಯಾಗಿದೆ.