ಗೋ ಗ್ರೀನ್ ಬಾಯ್ಸ್ ಪಂದ್ಯಕ್ಕೆ ವೇದಿಕೆ ಸಿದ್ಧ.. ಗ್ರೀನ್ ಜೆರ್ಸಿಯಲ್ಲಿ ಅದೃಷ್ಟ ಖುಲಾಯಿಸುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL 28ನೇ ಪಂದ್ಯದಲ್ಲಿ RCB ಮತ್ತು RR ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿ ಯಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ಈ ವಿಚಾರ ಇದೀಗ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಗ್ರೀನ್ ಜೆರ್ಸಿ ಅದೃಷ್ಟವಲ್ಲ ಎಂಬ ಮಾತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗ್ರೀನ್ ಜೆರ್ಸಿಯಲ್ಲಿ ಈವರೆಗೆ 14 ಪಂದ್ಯಗಳನ್ನಾಡಿದ್ದು, ನಾಲ್ಕು ಬಾರಿ ಮಾತ್ರ ಗೆಲುವು ಸಾಧಿಸಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋತಿದೆ.

ಇದೀಗ 16ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲು RCB ತಂಡ ಸಜ್ಜಾಗಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಗ್ರೀನ್ ಜೆರ್ಸಿ ಯಲ್ಲಿ ಗೆಲುವು ಸಾಧಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here