ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸ್ತುತ ಜಾತಿಗಣತಿ ವರದಿಯೇ ಸಿದ್ದರಾಮಯ್ಯಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಮಾರ್ಮಿಕವಾಗಿ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಸಿದ್ದರಾಮಯ್ಯಗೇ ಮರಣ ಶಾಸನ ಆಗಬಹುದು. ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ, ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ ಅನ್ನೋ ನೋವು ಕಾಡುತ್ತೆ ಎಂದು ಟೀಕಿಸಿದ್ದಾರೆ.