ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್‌ನ ರಾಜಧಾನಿ ಕೈವ್‌ನಲ್ಲಿರುವ ಭಾರತೀಯ ಔಷಧ ಕಂಪನಿಯ ಗೋಡೌನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತೀಯ ಉದ್ಯಮಿ ರಾಜೀವ್ ಗುಪ್ತಾ ಒಡೆತನದ ಕುಸುಮ್ ಗೋಡೌನ್ ಮೇಲೆ ಈ ದಾಳಿ ನಡೆದಿದೆ.
“ಭಾರತೀಯ ಔಷಧ ಕಂಪನಿ ಕುಸುಮ್‌ನ ಗೋದಾಮಿನ ಮೇಲೆ ರಷ್ಯಾ ದಾಳಿ ಮಾಡಿದೆ. ನಮ್ಮ ದೇಶದಲ್ಲಿರುವ ಭಾರತೀಯ ಕಂಪನಿಗಳನ್ನು ರಷ್ಯಾ ಟಾರ್ಗೆಟ್ ಮಾಡಿದೆ. ಭಾರತದೊಂದಿಗೆ ರಷ್ಯಾ ವಿಶೇಷ ಸ್ನೇಹವಿದೆ ಎಂದು ಹೇಳಿಕೊಳ್ಳುತ್ತಲೇ, ಭಾರತೀಯ ಕಂಪನಿಗಳನ್ನು ಗುರಿಯಾಗಿಸಿಕೊಂಡಿದೆ” ಎಂದು ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಆಕ್ರೋಶ ಹೊರಹಾಕಿದೆ.