ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ 9 ವಿಕೆಟ್ ಗೆಲುವು ದಾಖಲಿಸಿದೆ.
ರಾಜಸ್ಥಾನ ರಾಯಲ್ಸ್ 174 ರನ್ ಟಾರ್ಗೆಟ್ ನೀಡಿತ್ತು. ಮೊದಲೇ ಚೇಸಿಂಗ್ ಪಡೆದಿದ್ದ ಆರ್‌ಸಿಬಿ ಅಬ್ಬರ ಆರಂಭಗೊಂಡಿತು. ಫಿಲಿಪ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್, ಬಳಿಕ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಆಟ ಆರ್‌ಸಿಬಿಗೆ ಸುಲಭ ಗೆಲುವು ತಂದುಕೊಟ್ಟಿತು. 17.3 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಆರ್‌ಸಿಬಿ ಗೆಲುವು ದಾಖಲಿಸಿತು.
ಫಿಲ್ ಸಾಲ್ಟ್ 33 ಎಸೆತಗಳಲ್ಲಿ 65 ರನ್ಗಳಿಸಿದರೆ, ವಿರಾಟ್ ಕೊಹ್ಲಿ 43 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ಗಳ ಸಹಿತ ರನ್, ದೇವದತ್ ಪಡಿಕ್ಕಲ್ 27 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಿತ 36 ರನ್ಗಳಿಸಿದರು.