5 ವರ್ಷದ ಬಾಲಕಿ ಕೊಲೆ ಕೇಸ್: ಆರೋಪಿ ಮೇಲೆ ಫೈರಿಂಗ್ ಮಾಡಿ ಬಂಧಿಸಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ.

ಘಟನೆಯಲ್ಲಿ ಒಬ್ಬ ಪಿಎಸ್ಐ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಗಾಯಾಳು ಪೊಲೀಸ್ ಸಿಬ್ಬಂದಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ಯುವಕ 5 ವರ್ಷದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕಿಡ್ನಾಪ್ ಮಾಡಿ ಬಳಿಕ ಅತ್ಯಾಚಾರ ಆಗಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಘಟನೆ ಖಂಡಿಸಿ ಹುಬ್ಬಳ್ಳಿ ನಗರದಾದ್ಯಂತ ಪ್ರತಿಭಟನೆ ಜೋರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!