ತಡವಾದ್ರೂ ಪರವಾಗಿಲ್ಲ ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವರದಿ ಕೊಡ್ಲಿ: ಆರ್‌.ಅಶೋಕ್ ಆಗ್ರಹ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಸ್ಲಿಮರನ್ನು ಕೇವಲ ಮತ ಬ್ಯಾಂಕ್‌ ಆಗಿ ಮಾಡಿಕೊಳ್ಳಲು ಸಿದ್ದರಾಮಯ್ಯ ಜಾತಿ ಗಣತಿ ಮಾಡಿಸಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಜಾತಿ, ಧರ್ಮಗಳನ್ನು ಒಡೆಯುವ ಕೆಲಸವನ್ನು ಜಾತಿಗಣತಿ ಮೂಲಕ ಯಶಸ್ವಿಯಾಗಿ ಮಾಡಿಸಿದ್ದಾರೆ. ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು, ಮೂರನೆಯವರು ದಲಿತರು ಎಂದಿತ್ತು. ಈಗ ಮುಸ್ಲಿಮರು ಅತಿ ದೊಡ್ಡ ಜಾತಿ ಎನ್ನಲಾಗಿದೆ. ಮುಸ್ಲಿಮರಲ್ಲೂ ಹಲವು ಜಾತಿಗಳಿದ್ದರೂ ಅವರನ್ನು ವಿಂಗಡಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಜಾತಿ ಗಣತಿಯಲ್ಲಿ ಒಕ್ಕಲಿಗರಲ್ಲಿ ಕೆಲವು ಜಾತಿಗಳನ್ನು ವಿಂಗಡಿಸಲಾಗಿದೆ. ಕಾಂಗ್ರೆಸ್‌ಗೆ ಹೆಚ್ಚು ಮತ ನೀಡುವ ಜಾತಿಗಳ ಸಂಖ್ಯೆಯನ್ನು ಮಾತ್ರ ಹೆಚ್ಚಾಗಿ ತೋರಿಸಲಾಗಿದೆ. ಒಕ್ಕಲಿಗರಿಗೆ, ಲಿಂಗಾಯತರಿಗೆ ಮತ್ತು ದಲಿತರಿಗೆ ನಾಮ ಹಾಕಿದ್ದಾರೆ ಎಂದು ಅಶೋಕ್ ಟೀಕಿಸಿದ್ದು, ಆರು ತಿಂಗಳು ತಡವಾದರೂ ಪರವಾಗಿಲ್ಲ. ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವರದಿಯನ್ನು ರೂಪಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!