ಯುವತಿಯನ್ನು ತಬ್ಬಿಕೊಂಡು ಅಸಹ್ಯವಾಗಿ ನಡೆದುಕೊಂಡಿದ್ದ ಬೀದಿ ಕಾಮಣ್ಣ ಕಡೆಗೂ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಹಿಂದಿನಿದ ಬಂದು ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ನಡೆದು ಸುಮಾರು 10 ದಿನಗಳ ಬಳಿಕ ಇದೀಗ ಆರೋಪಿ ಸಂತೋಷ್ ಡೆನಿಯಲ್​​​ನನ್ನು ಕೇರಳ ಕೋಝಿಕ್ಕೋರ್​​ ಬಳಿಯ ಗ್ರಾಮದಿಂದ ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಕೋರ್ಟ್​ಗೆ ಹಾಜರುಪಡಿಸಿ ವಿಚಾರಣೆಗಾಗಿ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಆರೋಪಿಯ ಚಲನವಲನ ಪತ್ತೆಗೆ 1,800ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆರೋಪಿ ಪತ್ತೆಗಾಗಿ ಡಿಸಿಪಿ ಸಾರಾ ಫಾತೀಮಾ 2 ತಂಡ ರಚಿಸಿದ್ದರು.

ಏಪ್ರಿಲ್ 3ರಂದು ಮುಂಜಾನೆ ಆರೋಪಿಯು ಯುವತಿ ಮೇಲೆರಗಿದ್ದ. ಸ್ನೇಹಿತೆ ಜತೆ ಯುವತಿ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದು ಕಿರುಕುಳ ನೀಡಿ ಪರಾರಿಯಾಗಿದ್ದ. ಸಂತ್ರಸ್ತೆಗೂ ಆರೋಪಿಗೂ ಯಾವುದೇ ಪರಿಚಯ ಇರಲಿಲ್ಲ. ಘಟನೆ ಬಳಿಕ ಬೆಂಗಳೂರು ನಗರ ತೊರೆದಿದ್ದ ಆರೋಪಿ ತಲೆಮರೆಸಿಕೊಂಡಿದ್ದ. ಈ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ ಗೌಡ ದೂರು ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!