ಜೈನ ಮುನಿಗಳ ಮೇಲೆ ಹಲ್ಲೆ ಪ್ರಕರಣ: ಆರು ಮಂದಿ ಆರೋಪಿಗಳು ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಸಿಂಗೋಲಿ ನಗರದಲ್ಲಿ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ರಾಜಸ್ಥಾನ ಮೂಲದವರು ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ ಜೈನ ಮುನಿಗಳು ನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹನುಮಾನ್‌ ದೇಗುಲದ ಬಳಿ ಬೈಕ್‌ನಲ್ಲಿ ಬಂದ ಯುವಕರು ಮುನಿಗಳನ್ನು ತಡೆದು, ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಬಳಿಕ ಅವರ ಮೇಲೆ ಹಲ್ಲೆ ನಡೆಸಿದ್ದು, ಮುನಿಗಳಿಗೆ ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುನಿಗಳ ಮೇಲೆ ಹಲ್ಲೆ ನಡೆದ ಹಿನ್ನೆಲೆ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದು, ಸಿಂಗೋಲಿ ನಗರದಲ್ಲಿ ಬಂದ್‌ ಆಚರಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!