ವಕ್ಫ್ ತಿದ್ದುಪಡಿ ಕಾಯ್ದೆ: ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ‘ಸುಪ್ರೀಂ’ ಮೆಟ್ಟಿಲೇರಿದ CPI

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ CPI (ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ಒಪ್ಪಿಗೆಯ ನಂತರ ಏಪ್ರಿಲ್ 5ರಂದು ಪ್ರಕಟವಾದ ತಿದ್ದುಪಡಿ ಕಾಯ್ದೆಯು ವಕ್ಫ್ ಮಂಡಳಿಯ ಸ್ವಾಯತ್ತತೆಯನ್ನು ಗಣನೀಯವಾಗಿ ಮೊಟಕುಗೊಳಿಸುತ್ತದೆ ಮತ್ತು 1995ರ ವಕ್ಫ್ ಕಾಯ್ದೆಯ ಚೌಕಟ್ಟನ್ನು ಮೂಲಭೂತವಾಗಿ ಪರಿವರ್ತಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ವಾದಿಸಲಾಗಿದೆ.

ಜನರ ವಿರೋಧದ ನಡುವೆಯೂ ಮಸೂದೆ ಪರಿಶೀಲನೆಗೆ ನೇಮಕವಾಗಿದ್ದ ಜಂಟಿ ಸಂಸದೀಯ ಸಮಿತಿಯ ಆಕ್ಷೇಪಗಳು ಮತ್ತು ಇತರರ ಅಭಿಪ್ರಾಯಗಳನ್ನು ಪರಿಗಣಿಸದೆ ಕೇಂದ್ರವು ಕಾಯ್ದೆಗೆ ಅನುಮೋದನೆ ನೀಡಿದೆ ಎಂದು ಸಿಪಿಐ ಹೇಳಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!