January 31, 2026
Saturday, January 31, 2026
spot_img

WPLನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಡಿ ಕ್ಲರ್ಕ್: ಆರ್‌ಸಿಬಿ ಪರ ಹೊಸ ದಾಖಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ಇತಿಹಾಸ ನಿರ್ಮಾಣವಾಗಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ್ತಿ ನಾಡಿನ್ ಡಿ ಕ್ಲರ್ಕ್ ಅಸಾಧಾರಣ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿ ಪರ ಒಂದೇ ಸೀಸನ್‌ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಡಬ್ಲ್ಯುಪಿಎಲ್‌ನ 18ನೇ ಪಂದ್ಯದಲ್ಲಿ ನಾಡಿನ್ ನಾಲ್ಕು ಓವರ್‌ಗಳಲ್ಲಿ ಕೇವಲ 22 ರನ್ ನೀಡಿದರು. ಇದರೊಂದಿಗೆ ಯುಪಿ ವಾರಿಯರ್ಸ್ ತಂಡದ ನಾಲ್ವರು ಪ್ರಮುಖ ಬ್ಯಾಟರ್‌ಗಳನ್ನು ಔಟ್ ಮಾಡಿ ಪಂದ್ಯಕ್ಕೆ ತಿರುವು ನೀಡಿದರು. ಈ ಪ್ರದರ್ಶನದೊಂದಿಗೆ ಈ ಸೀಸನ್‌ನಲ್ಲಿ ಅವರ ಒಟ್ಟು ವಿಕೆಟ್ ಸಂಖ್ಯೆ 15ಕ್ಕೆ ಏರಿಕೆಯಾಯಿತು.

ಇದನ್ನೂ ಓದಿ:

ಇದಕ್ಕೂ ಮೊದಲು ಈ ದಾಖಲೆಯನ್ನು ಕನ್ನಡತಿ ಶ್ರೇಯಾಂಕಾ ಪಾಟೀಲ್ ಹೊಂದಿದ್ದರು. 2024ರ ಸೀಸನ್‌ನಲ್ಲಿ ಶ್ರೇಯಾಂಕಾ ಎಂಟು ಪಂದ್ಯಗಳಲ್ಲಿ 13 ವಿಕೆಟ್ ಪಡೆದು ಆರ್‌ಸಿಬಿ ಪರ ದಾಖಲೆ ನಿರ್ಮಿಸಿದ್ದರು. ಆದರೆ ಈ ಬಾರಿ ನಾಡಿನ್ ಡಿ ಕ್ಲರ್ಕ್ ಆ ದಾಖಲೆಯನ್ನು ಮುರಿದು ಹೊಸ ಮಾನದಂಡ ಸ್ಥಾಪಿಸಿದ್ದಾರೆ.

ಎಂಟು ಪಂದ್ಯಗಳಲ್ಲಿ 15 ವಿಕೆಟ್ ಕಬಳಿಸಿರುವ ನಾಡಿನ್, ಆರ್‌ಸಿಬಿ ಬೌಲಿಂಗ್ ವಿಭಾಗದ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಅವರ ಈ ಸಾಧನೆ ಡಬ್ಲ್ಯುಪಿಎಲ್ ಇತಿಹಾಸದಲ್ಲೂ ವಿಶೇಷ ಸ್ಥಾನ ಪಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !