ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿ ಅವರು ಇನ್ನೊಂದು ವರ್ಷ ಮಾತ್ರ ಪ್ರಧಾನಿಯಾಗಿರುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸ್ವ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಾರೂ ಪ್ರಯತ್ನ ನಡೆಸುತ್ತಿಲ್ಲ. ಮೋದಿ ಅವರು ಮುಂದಿನ ವರ್ಷ ಪಿಎಂ ಆಗಿ ಇರುವುದಿಲ್ಲ. ಇದನ್ನು ಬಿಜೆಪಿಯವರು ಯಾರೂ ಹೇಳಿಕೊಳ್ಳುತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.