ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಸಿಬಿ ಮಾದಕವಸ್ತು ನಿಗ್ರಹದಳ ಬೆಂಗಳೂರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.
ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಒಂದು ಪ್ರಕರಣದಲ್ಲಿ 3.5 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಬಂಧಿತನ ಬಳಿಯಿದ್ದ 30 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜತೆಗೆ, ಮತ್ತೊಂದು ಪ್ರಕರಣದಲ್ಲಿ 1.5 ಕೋಟಿ ರೂ. ಮೌಲ್ಯದ ಸುಮಾರು 1 ಕೆಜಿ ಎಂಡಿಎಂಎ ಡ್ರಗ್ ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ಈಗಲ್ ಟನ್ ರೆಸಾರ್ಟ್ನಲ್ಲಿ ಅರೆಸ್ಟ್ ಆಗಿದ್ದ ಪೆಡ್ಲರ್ನಿಂದಲೇ ಮತ್ತೆ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.