ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪಘಾತ ಪ್ರಕರಣವೊಂದರಲ್ಲಿ ಸಂಧಾನಕ್ಕೆ ಒಪ್ಪದೇ ನ್ಯಾಯಾಲಯಕ್ಕೆ ಕಾಲಿಟ್ಟಿದ್ದಕ್ಕಾಗಿ ತಾಯಿ ಮಗನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ಕೊಲೆ ನಡೆದಿದ್ದು, ಚಂದ್ರವ್ವ ಅಪ್ಪಾರಾಯ ಇಚೇರಿ(65), ಅವರ ಪುತ್ರ ವಿಠ್ಠಲ ಅಪ್ಪಾರಾಯ ಇಚೇರಿ(42) ಮೃತರು. ಮೃತರು ಕೊಡಗನೂರುನಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿರುವ ಸಣ್ಣ ಮನೆಯಲ್ಲಿ ವಾಸವಿದ್ದರು.
ಚಂದ್ರವ್ವ ಪತಿ ನಿಧರನಾಗಿದ್ದು, ಮಗಳು ವಿವಾಹವಾಗಿ ಬೇರೆಡೆ ವಾಸವಿದ್ದಾರೆ. ಅಪಘಾತ ಪ್ರಕರಣವೊಂದರಲ್ಲಿ ಚಂದ್ರವ್ವ ಅವರು ಸಂಧಾನಕ್ಕೆ ನಿರಾಕರಿಸಿದ್ದರು. ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೇ ಕಾರಣಕ್ಕೆ ಹತ್ಯೆಯಾಗಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.