ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ನ 31ನೇ ಪಂದ್ಯದಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಚಂಡೀಗಢದ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.
ಪಂಜಾಬ್ ಕಿಂಗ್ಸ್ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ಐದು ಪಂದ್ಯಗಳನ್ನು ಆಡಿದೆ. ಈ ಪೈಕಿ 4 ಮೂರರಲ್ಲಿ ಗೆದ್ದು 2ರಲ್ಲಿ ಸೋಲುಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದಿದ್ದ ಕೊನೆಯ ಪಂದ್ಯದಲ್ಲಿ ಪಂಜಾಬ್ 8 ವಿಕೆಟ್ಗಳಿಂದ ಸೋಲು ಕಂಡಿತ್ತು. ಸದ್ಯ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಅಜಿಂಕ್ಯ ರಹಾನೆ ನಾಯಕತ್ವದ ಕೆಕೆಆರ್ ಈವರೆಗೂ ಆಡಿದ 6 ಪಂದ್ಯಗಳ ಪೈಕಿ 3ರಲ್ಲಿ ಗೆದ್ದು 3ರಲ್ಲಿ ಸೋಲು ಅನುಭವಿಸಿದೆ. ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು 8 ವಿಕೆಟ್ಗಳಿಂದ ಮಣಿಸಿತ್ತು. ಪಾಯಿಂಟ್ಸ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಈ ತಂಡಗಳು ಈವರೆಗೂ 33 ಪಂದ್ಯಗಳಲ್ಲಿ ಎದುರುಬದುರಾಗಿವೆ. ಕೆಕೆಆರ್ 21 ಬಾರಿ ಗೆದ್ದಿದೆ. ಪಂಜಾಬ್ 12 ಪಂದ್ಯಗಳನ್ನು ಜಯಿಸಿದೆ. ಈ ಬಾರಿ ಜಯ ಯಾರದು ಎಂದು ಕಾದುನೋಡಬೇಕಿದೆ.