ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ಗೆ ಕ್ರಿಕೆಟ್: ಕೊನೆಗೂ ಫಿಕ್ಸ್ ಆಯಿತು ಗ್ರೌಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

128 ವರ್ಷಗಳ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಎಂಟ್ರಿಕೊಟ್ಟಿದ್ದು, 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಅಧಿಕೃತವಾಗಿ ಸೇರಿಸಲಾಗಿದೆ.

ಇದೀಗ ಕ್ಯಾಲಿಫೋರ್ನಿಯಾದ ಪೊಮೊನಾ (Pomona) ನಗರದಲ್ಲಿ 500 ಎಕರೆ ವಿಸ್ತೀರ್ಣದ ಮೈದಾನದಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಲಿವೆ ಎಂಬ ಮಾಹಿತಿಯನ್ನು ಐಸಿಸಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಪೊಮೋನಾದಲ್ಲಿ ಕ್ರಿಕೆಟ್ ಆಡಲಾಗುವ ಮೈದಾನವನ್ನು ಫೇರ್‌ಪ್ಲೆಕ್ಸ್ ಎಂದೂ ಕರೆಯುತ್ತಾರೆ. ಅಲ್ಲಿ ಕ್ರಿಕೆಟ್ ಅಥವಾ ಯಾವುದೇ ಇತರ ಕ್ರೀಡೆಗೆ ಈಗಾಗಲೇ ಇರುವ ಯಾವುದೇ ಸಂಕೀರ್ಣವಿಲ್ಲ. ಸಾಮಾನ್ಯವಾಗಿ ಇದನ್ನು ಮೇಳಗಳನ್ನು ಆಯೋಜಿಸಲು ಬಳಸಲಾಗುತ್ತಿತ್ತು. 500 ಎಕರೆ ಪ್ರದೇಶದಲ್ಲಿ ಹರಡಿರುವ ಈ ಮೈದಾನವು 103 ವರ್ಷಗಳಿಂದ (1922) ಲಾಸ್ ಏಂಜಲೀಸ್ ಕೌಂಟಿ ಮೇಳವನ್ನು ಆಯೋಜಿಸುತ್ತಿದೆ. ಆದರೆ ಈಗ ಕ್ರಿಕೆಟ್‌ಗಾಗಿ ಇಲ್ಲಿ ತಾತ್ಕಾಲಿಕ ಸ್ಥಳವನ್ನು ಸಿದ್ಧಪಡಿಸಲಾಗುವುದು. ಇದಕ್ಕೂ ಮೊದಲು, ಅಂದರೆ 2024 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ಗೆ ಅಮೆರಿಕ ಆತಿಥ್ಯವಹಿಸಿತ್ತು. ಆ ಸಮಯದಲ್ಲಿ ಉದ್ಯಾನವನ ಪ್ರದೇಶದಲ್ಲಿ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿತ್ತು.

ಒಲಿಂಪಿಕ್ ಪೋಸ್ಟರ್‌ನಲ್ಲಿ ಕೊಹ್ಲಿ
ಒಲಿಂಪಿಕ್ಸ್ ಆಯೋಜಿಸುವ ಸಮಿತಿಯು ಕ್ರಿಕೆಟ್ ಪಂದ್ಯಾವಳಿ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡುವ ಪೋಸ್ಟರ್ ಅನ್ನು ಸಹ ಹಂಚಿಕೊಂಡಿದೆ. ಈ ಪೋಸ್ಟರ್‌ನಲ್ಲಿ ವಿರಾಟ್ ಕೊಹ್ಲಿ ಅವರ ಭಾವಚಿತ್ರವನ್ನು ಬಳಸಿದ್ದಾರೆ.

ಇತ್ತೀಚೆಗೆ, ಐಒಸಿ (ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ) ಲಾಸ್ ಏಂಜಲೀಸ್ ಒಲಿಂಪಿಕ್ಸ್ 2028 ರಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ತಲಾ 6 ತಂಡಗಳನ್ನು ಸೇರಿಸಲು ಅನುಮೋದನೆ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!