WEATHER | ಬೆಳಗ್ಗೆಯೆಲ್ಲಾ ಬಿಸಿಲು, ಸಂಜೆ ಮೇಲೆ ಜೋರು ಮಳೆ, ಯಾವ ಜಿಲ್ಲೆಗಳಲ್ಲಿ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಹಿನ್ನೆಲೆ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.

ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗ್ಗೆಯೆಲ್ಲಾ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ಮೇಳೆ ಜೋರು ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ದಾವಣಗೆರೆ,ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!