ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ (Bengaluru) ಪೀಣ್ಯದಲ್ಲಿ ಫ್ಲೈಓವರ್ ಮೇಲೆ ಲಾರಿಯೊಂದು ಏಕಾಏಕಿ ಹೊತ್ತಿ ಉರಿದ ಘಟನೆ ನಡೆದಿದೆ.
ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕೂಡಲೇ ಲಾರಿಯಿಂದ ಕೆಳಗಿಳಿದಿದ್ದಾರೆ. ಬೆಂಕಿ ಹೊತ್ತಿಕೊಂಡ ಹಿನ್ನೆಲೆ ನಗರದ ಕಡೆಗೆ ಕೆಲಗಂಟೆಗಳ ಕಾಲ ಪೀಣ್ಯ ಫ್ಲೈಓವರ್ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.
ಘಟನೆ ನಡೆದ ಕೂಡಲೇ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.