ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರುನಲ್ಲಿ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಕಳೆದ ಒಂದು ದಶಕದಿಂದ ಕೇಂದ್ರ ಸರ್ಕಾರ ಇಡಿ, ಐಟಿ ಹಾಗೂ ಜಿಎಸ್ಟಿ ಸಂಸ್ಥೆಗಳನ್ನು ಬಳಸಿಕೊಂಡು ಉದ್ಯಮಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರದ ಮಾತು ಕೇಳದ ಉದ್ಯಮಿಗಳನ್ನು ಗುರಿಯಾಗಿಸಿಕೊಂಡು ತನಿಖೆಗಳ ಹೆಸರಿನಲ್ಲಿ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಉದ್ಯಮಿ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವುದೇ ಕಿರುಕುಳದ ತೀವ್ರತೆಯನ್ನು ತೋರಿಸುತ್ತದೆ ಎಂದು ಹೇಳಿದ ಖರ್ಗೆ, ಈ ಸಮಸ್ಯೆ ಕೇವಲ ದೊಡ್ಡ ಉದ್ಯಮಿಗಳಷ್ಟೇ ಅಲ್ಲ, ಸಾಮಾನ್ಯ ಜನರಿಗೂ ಎದುರಾಗುತ್ತಿದೆ ಎಂದರು. ಅಂಬಾನಿ, ಅದಾನಿ ಮುಂತಾದವರಿಗೆ ಯಾವುದೇ ರೀತಿಯ ಇಡಿ ಅಥವಾ ಐಟಿ ಕಿರುಕುಳ ಇಲ್ಲ, ಸರ್ಕಾರ ಅವರ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪವನ್ನೂ ಅವರು ಮುಂದಿಟ್ಟರು. ಈ ವಿಚಾರದಲ್ಲಿ ಸಾಕಷ್ಟು ಉದಾಹರಣೆಗಳಿವೆ ಎಂದು ಹೇಳಿದರು.
ಇದನ್ನೂ ಓದಿ:
ರಾಯ್ ಕೆಳಮಟ್ಟದಿಂದ ಮೇಲೆ ಬಂದ ಉದ್ಯಮಿ ಎಂದು ಉಲ್ಲೇಖಿಸಿದ ಖರ್ಗೆ, ಅವರು ಇಂತಹ ತೀರ್ಮಾನಕ್ಕೆ ಏಕೆ ಬಂದರು ಎಂಬುದರ ಕುರಿತು ಸಮಗ್ರ ತನಿಖೆ ಅಗತ್ಯವಿದೆ ಎಂದರು. ಐಟಿ ಅಧಿಕಾರಿಗಳ ಪಾತ್ರದ ಮೇಲೂ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.



