ಫೇಸ್​ಬುಕ್​ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪಟ್ಟಣದ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೇಸ್​​ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿದ ಅವರು, ಆ ನಂತರ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಇವರೇ ಕಾರಣ ಎಂದು ಹಲವರನ್ನು ಹೆಸರಿಸಿರುವ ಅವರು, ಆ ಪೈಕಿ ಕಿರಣ್ ಎಂಬಾತನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸಮಂದೂರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್​​, ಭಾಸ್ಕರ್, ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಇವರೇ ನನ್ನ ಸಾವಿಗೆ ಕಾರಣ. ಯಾರನ್ನು ಬಿಟ್ಟರೂ ಕಿರಣ್​​​​​ನನ್ನು ದಯವಿಟ್ಟು ಬಿಡಬೇಡಿ. ಕಿರಣ್ ಹಲವು ಹೆಣ್ಣು ಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಿದ್ದಾನೆ. ಕಿರಣ್​​ ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿವೆ. ಹಣದ ವಿಚಾರವಾಗಿ ಮಾತುಕತೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಫೇಸ್​​ಬುಕ್ ವಿಡಿಯೋದಲ್ಲಿ ಪ್ರವೀಣ್ ಗೌಡ ಆರೋಪಿಸಿದ್ದಾರೆ.

ಆನೇಕಲ್ ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜುಗೌಡ ವಿರುದ್ಧವೂ ಆರೋಪ ಮಾಡಲಾಗಿದೆ. ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಮನೆಗೆ ಕರೆದಿದ್ದರು. ಆ ಸಂದರ್ಭದಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಹಾಗೂ ಆಕೆಯ ಪತಿ ಶ್ರೀನಿವಾಸ್ ಇದ್ದರು. ಏಕಾಏಕಿ ಹತ್ತಾರು ಮಂದಿಯನ್ನು ಕರೆಸಿಕೊಂಡಿದ್ದ ಭಾಗ್ಯಮ್ಮ ಶ್ರೀನಿವಾಸ್, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಪ್ರವೀಣ್ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!