ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ್ದು ನಿಜ ಆದಲ್ಲಿ ಕಠಿಣ ಕ್ರಮ ಕೈಗೊಳ್ತೇವೆ; ಸಚಿವ ಎಂಸಿ ಸುಧಾಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ನಡೆದಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!