ಯುನೆಸ್ಕೋದ ವಿಶ್ವ ನೋಂದಣಿ ಪಟ್ಟಿಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ; ಇದು ಹೆಮ್ಮೆಯ ಕ್ಷಣ ಎಂದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತ ಈ ಹೆಸರು ಕೇಳಿದ ಕೂಡಲೇ ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯೂ ಕಣ್ಣ ಮುಂದೇ ಬರುತ್ತದೆ. ಆದರೆ ಇದೀಗ ಭಾರತದ ಪ್ರಮುಖ ಗ್ರಂಥಗಳಾದ ಭಗವದ್ಗೀತಾ ಮತ್ತು ಭರತ ಮುನಿಗಳ ನಾಟ್ಯಶಾಸ್ತ್ರಕ್ಕೆ ಯುನೆಸ್ಕೋದಿಂದ  ಮನ್ನಣೆ ಸಿಕ್ಕಿದೆ.

ಹೌದು, ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಈ ಎರಡು ಪ್ರಮುಖ ಗ್ರಂಥಗಳನ್ನು ಸೇರ್ಪಡೆಗೊಳಿಸಲಾಗಿದೆ. ಇದು ಭಾರತೀಯರ ಪಾಲಿನ ಮರೆಯಲಾಗದ ಕ್ಷಣಗಳಲ್ಲಿ ಒಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣವಾಗಿದೆ. ಈ ಸೇರ್ಪಡೆ ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆಯಾಗಿದೆ. ಗೀತೆ ಮತ್ತು ನಾಟ್ಯಶಾಸ್ತ್ರವು ಶತಮಾನಗಳಿಂದ ನಾಗರಿಕತೆ ಮತ್ತು ಪ್ರಜ್ಞೆಯನ್ನು ಪೋಷಿಸಿವೆ. ಅವರ ಒಳನೋಟಗಳು ಜಗತ್ತಿಗೆ ಸ್ಫೂರ್ತಿ ನೀಡುತ್ತಲೇ ಇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅದಲ್ಲದೇ, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆಗೊಳಿಸಿರುವುದು ಭಾರತದ ನಾಗರಿಕ ಪರಂಪರೆಗೆ ಐತಿಹಾಸಿಕ ಕ್ಷಣ. ಈ ಜಾಗತಿಕ ಗೌರವವು ಭಾರತದ ಶಾಶ್ವತ ಬುದ್ಧಿವಂತಿಕೆ ಮತ್ತು ಕಲಾತ್ಮಕ ಪ್ರತಿಭೆಗೆ ಸಾಕ್ಷಿಯಾಗಿದೆ. ಇದು ಭಾರತದ ವಿಶ್ವದೃಷ್ಟಿಕೋನ, ನಾವು ಯೋಚಿಸುವ, ಅನುಭವಿಸುವ, ಬದುಕುವ ತಾತ್ವಿಕ ಮತ್ತು ಸೌಂದರ್ಯಕ್ಕೆ ಅಡಿಪಾಯಗಳಾಗಿವೆ. ನಾವೀಗ ಅಂತಾರಾಷ್ಟ್ರೀಯ ನೋಂದಣಿಯಲ್ಲಿ ನಮ್ಮ ದೇಶದಿಂದ 14 ಶಾಸನಗಳನ್ನು ಹೊಂದಿದ್ದೇವೆ’ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!