ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಇಟಿ ಪರೀಕ್ಷೆಗೆ ತೆರಳಿದ್ದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿರಿಯಕ್ಕನ ಚಾಳಿನೆ ಮಂದಿಗೆ ಅನ್ನೋ ಗಾದೆ ಮಾತೇ ಇದೆ. ನಾಡಿನ ದೊರೆ (ಸಿದ್ದರಾಮಯ್ಯ) ಅವರ ಚಾಳಿ ಎಲ್ಲಾ ಅಧಿಕಾರಿಗಳಿಗೂ ಬಂದಿದೆ. ಇದು ಸರಿಯಲ್ಲ. ಈ ಘಟನೆ ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಆಡಳಿತ ವೈಖರಿಯನ್ನ ತೋರಿಸಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯೇ ಸಮಾಜದಲ್ಲಿ ಒಡಕು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೇರೆ ಬೇರೆ ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ. ಇದು ಅಧಿಕಾರಿಗಳಿಗೂ ಪ್ರೇರಣೆಯಾಗಿರಬಹುದು. ಮುಂದಿನ ದಿನಗಳಲ್ಲಿ ಜನರೇ ಉತ್ತರ ಕೊಡುತ್ತಾರೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.