ಯುಪಿಯಲ್ಲಿ ಅತ್ಯಾಚಾರದ ಆರೋಪಿಯನ್ನು ಬೆತ್ತಲುಗೊಳಿಸಿ ಎತ್ತಿನ ಗಾಡಿಗೆ ಕಟ್ಟಿ ಥಳಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ವಿಶೇಶ್ವರಗಂಜ್ ಪ್ರದೇಶದಲ್ಲಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

22 ವರ್ಷದ ಯುವಕನ ದೇಹವನ್ನು ಬೆತ್ತಲೆಗೊಳಿಸಿ ಎತ್ತಿನ ಬಂಡಿಗೆ ಕಟ್ಟಿ ಹಾಕಲಾಗಿದೆ. ಕೆಲವರು ನಾಯಿಯನ್ನು ಅವನ ಮೇಲೆ ದಾಳಿ ಮಾಡಲು ಪ್ರೇರೇಪಿಸುತ್ತಿರುವುದನ್ನು ಮತ್ತು ಇತರರು ಥಳಿಸಬೇಕೆಂದು ಪ್ರೋತ್ಸಾಹಿಸುತ್ತಿರುವುದು ಕೇಳಿಬರುತ್ತಿದೆ. ಆತ ಸಾಯಬೇಕು ಎಂಬ ಆಗ್ರಹ ಗುಂಪಿನಿಂದ ಕೇಳಿಬರುತ್ತಿದೆ.

ಗುರುವಾರ ವಿಡಿಯೋ ವ್ಯಾಪಕವಾಗಿ ಪ್ರಸಾರವಾದ ನಂತರ, ವ್ಯಕ್ತಿಯ ಕುಟುಂಬ ಸ್ಥಳೀಯ ಪೊಲೀಸರಿಗೆ ದೂರು ನೀಡಿದೆ.
ಮಹಿಳೆಯೊಬ್ಬರ ಲಿಖಿತ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ವಿಭಾಗಗಳ ಅಡಿಯಲ್ಲಿ ಹಲ್ಲೆ ಮತ್ತು ಹಾನಿಗಾಗಿ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಪಾಂಡೆ ಶುಕ್ರವಾರ ತಿಳಿಸಿದ್ದಾರೆ.

ಕುಟುಂಬದವರು ಆತನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಹಲ್ಲೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!