ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಅಧಿಕಾರಿಗಳ ಹೇಳಿಕೆಗೆ ಭಾರತ ತಿರುಗೇಟು ನೀಡಿದೆ.
ಪಶ್ಚಿಮ ಬಂಗಾಳದಲ್ಲಿನ ಘಟನೆಗಳಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಕಡೆಯಿಂದ ಬಂದ ಹೇಳಿಕೆಗಳನ್ನು ನಾವು ತಳ್ಳಿ ಹಾಕುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಭಾರತದ ಕಳವಳಕ್ಕೆ ಪ್ರತಿಯಾಗಿ ನಮ್ಮ ದೇಶದ ಮೇಲೂ ಸಮಾನವಾದ ಆರೋಪವನ್ನು ಹೊರಿಸಿ ಗಮನ ಬೇರೆಡೆಗೆ ಸೆಳೆಯಲು ಯತ್ನಿಸಲಾಗುತ್ತಿದೆ. ಬಾಂಗ್ಲಾ ತನ್ನದೇ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಗಮನಹರಿಸುವುದು ಒಳಿತು ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತ ಮುಸ್ಲಿಮರ ರಕ್ಷಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳುವಂತೆ ಭಾರತ ಹಾಗೂ ಪಶ್ಚಿಮ ಬಂಗಾಳ ಸರ್ಕಾರವನ್ನು ಒತ್ತಾಯಿಸುತ್ತೇವೆ. ಅಲ್ಪಸಂಖ್ಯಾತರ ರಕ್ಷಣೆಗೆ ಎಲ್ಲ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ ಹೇಳಿದ್ದರು.