ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆ ಮೂನ್ಸುಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಾಯಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.