ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ತಡರಾತ್ರಿ 12:50ರ ವೇಳೆಗೆ 2 ಸುತ್ತು ಗುಂಡು ಹಾರಿಸಲಾಗಿದೆ.
ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಎಲ್ಲ ಆಯಾಮಗಳನ್ನು ಗಮನಕ್ಕೆ ಇಟ್ಟುಕೊಂಡಿದ್ದಾರೆ. ಅಟ್ಯಾಕ್ ಹಿಂದೆ ರಿಯಲ್ ಎಸ್ಟೇಟ್ ಮಾಫಿಯಾ ಇದೆಯಾ ಎನ್ನುವ ಅನುಮಾನ ಮೂಡಿದೆ. ಲ್ಯಾಂಡ್ ವಿಚಾರಕ್ಕೆ ಈ ಹಿಂದೆ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗ್ತಿದೆ.
ಅಂತೆಯೇ ರಿಕ್ಕಿ ಮೇಲೆ ನಡೆದ ಫೈರಿಂಗ್ಗೆ ಸಂಬಂಧಿಸಿದಂತೆ ಕಾರು ಚಾಲಕ ಬಸವರಾಜು ಅವರು ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗುಂಡಿನ ದಾಳಿಯಲ್ಲಿ ಮೂವರ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ರಿಕ್ಕಿ ರೈ ನ ಮೊದಲ ಪತ್ನಿ ಅನ್ನಪೂರ್ಣ, ರಾಕೇಶ್ ಮಲ್ಲಿ ಹಾಗೂ ನಿತೇಶ್ ಎಸ್ಟೇಟ್ ಕಂಪನಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ.