ಹೊಸದಿಗಂತ ಡಿಜಿಟಲ್ ಡೆಸ್ಕ್:
IPL ನ 34ನೇ ಪಂದ್ಯದಲ್ಲಿ PBKS ವಿರುದ್ಧ RCB ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಆರ್ಸಿಬಿ ತಂಡವನ್ನು ಬ್ಯಾಟಿಂಗ್ಗೆ ಮೊದಲು ಆಹ್ವಾನಿಸಿದ್ದರು. ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಬ್ಯಾಟ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಟಿಮ್ ಡೇವಿಡ್ ಅರ್ಧಶತಕ ಬಾರಿಸಿ ತಂಡವು ನಿಗದಿತ 14 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು.
96 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ನೆಹಾಲ್ ವಧೇರಾ ಅತ್ಯುತ್ತಮ ಬ್ಯಾಟಿಂಗ್ನೊಂದಿಗೆ ಅಜೇಯ 33 ರನ್ ಬಾರಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ಪಡೆ 12.1 ಓವರ್ಗಳಲ್ಲಿ 98 ರನ್ ಬಾರಿಸಿ 5 ವಿಕೆಟ್ಗಳ ಗೆಲುವು ದಾಖಲಿಸಿತು.
ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳಲ್ಲಿ ಸೋತ ತಂಡವೆಂಬ ಅಪಕೀರ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಹೀನಾಯ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೆಸರಿನಲ್ಲಿತ್ತು. ಇದೀಗ ಈ ದಾಖಲೆಯನ್ನು ಬೆಂಗಳೂರು ತಂಡ ಮುರಿದಿದೆ. ಆರ್ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 94 ಪಂದ್ಯಗಳನ್ನು ಆಡಿದೆ. ಬರೋಬ್ಬರಿ 46 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ.