ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿಯಿಂದ ತನಿಖೆ ಆಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತಣಿಕೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ . ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಸಹ ಇರುತ್ತಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅವರಿಗೆ ಏನಾದರೂ ಸಮಸ್ಯೆ ಇತ್ತ?ಎನ್ನುವುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತೆ ಎಂದರು.



