ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಅವರು ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕದ ಬಿಲಿಯನೇರ್ ನಡೆಸಿದ ದೂರವಾಣಿ ಸಂಭಾಷಣೆಯ ನಂತರ, ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಸಹಕಾರವನ್ನು ಹೆಚ್ಚಿಸುವ ಕುರಿತು ಇಬ್ಬರು ನಾಯಕರ ನಡುವಿನ ನಿರಂತರ ಸಂವಾದ ನಡೆಸಲಾಗಿದೆ.
“ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡುವುದು ಗೌರವದ ಸಂಗತಿ. ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲು ನಾನು ಎದುರು ನೋಡುತ್ತಿದ್ದೇನೆ!” ಎಂದು ಎಲಾನ್ ಮಸ್ಕ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ನಮ್ಮ ಸಭೆಯಲ್ಲಿ ನಾವು ಚರ್ಚಿಸಿದ ವಿಷಯಗಳು ಸೇರಿದಂತೆ ಎಲಾನ್ ಮಸ್ಕ್ ಅವರೊಂದಿಗೆ ಮಾತನಾಡಿದೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ನಾವು ಚರ್ಚಿಸಿದ್ದೇವೆ. ಈ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸಲು ಭಾರತ ಬದ್ಧವಾಗಿದೆ” ಎಂದು ಪ್ರಧಾನಿ ಮೋದಿ ಕೂಡ ಪೋಸ್ಟ್ ಮಾಡಿದ್ದಾರೆ.