January 31, 2026
Saturday, January 31, 2026
spot_img

‘ಜನ ನಾಯಗನ್’ ಸಿನಿಮಾ ರಿಲೀಸ್ ಗೆ ಇನ್ನೂ ಸಿಗದ ಗ್ರೀನ್ ಸಿಗ್ನಲ್: ನಿರ್ಮಾಪಕರ ಸ್ಥಿತಿ ಕಂಡು ನಟ ವಿಜಯ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

‘ಜನ ನಾಯಗನ್’ ಸಿನಿಮಾ ರಿಲೀಸ್ ಗೆ ಇನ್ನೂ ಕೂಡ ಅನುಮತಿ ಸಿಕ್ಕಿಲ್ಲ. ಸೆನ್ಸಾರ್ ಮಂಡಳಿಯವರು ಸಿನಿಮಾಗೆ ಪ್ರಮಾಣಪತ್ರ ನೀಡದೇ ಇರುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಕೆಳ ಹಂತದ ನ್ಯಾಯಾಯಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಆಗಿದೆ. ಆದರೆ, ಎಲ್ಲಿಯೂ ಸಿನಿಮಾ ತಂಡಕ್ಕೆ ಶುಭ ಸುದ್ದಿ ಸಿಕ್ಕಿಲ್ಲ. ಹೀಗಾಗಿ ದಳಪತಿ ವಿಜಯ್ ನಿರ್ಮಾಪಕರ ಸ್ಥಿತಿ ಕಂಡು ಮರುಗಿದ್ದಾರೆ.

ಜನವರಿ 9ರಂದು ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ತಿಂಗಳು ಕಳೆಯುತ್ತಾ ಬಂದರೂ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸುತ್ತಿದ್ದಾರೆ.

ಈ ಕುರಿತು ಬೇಸರ ವ್ಯಕ್ತಪಡಿಸಿದ ನಟ ವಿಜಯ್, ನನ್ನ ರಾಜಕೀಯ ಪ್ರವೇಶದ ಕಾರಣದಿಂದ ಜನ ನಾಯಗನ್ ಚಿತ್ರಕ್ಕೆ ತೊಂದರೆ ಆಗುತ್ತಿದೆ. ನನ್ನ ನಿರ್ಮಾಪಕರ ಬಗ್ಗೆ ನನಗೆ ಬೇಸರವಾಗುತ್ತಿದೆ. ನನ್ನ ರಾಜಕೀಯ ಪ್ರವೇಶದಿಂದಾಗಿ ನನ್ನ ಚಿತ್ರಕ್ಕೆ ತೊಂದರೆಯಾಗುತ್ತದೆ ಎಂದು ನನಗೆ ತಿಳಿದಿತ್ತು. ನಾನು ಇದಕ್ಕೆ ಮಾನಸಿಕವಾಗಿ ಸಿದ್ಧನಾಗಿದ್ದೆ ಎಂದು ಅವರು ಹೇಳಿದ್ದಾರೆ.

‘ಜನ ನಾಯಗನ್’ ಚಿತ್ರದ ಬಜೆಟ್ 500 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾದಲ್ಲಿ ಮಮಿತಾ ಬೈಜು, ಪೂಜಾ ಹೆಗ್ಡೆ ಮೊದಲಾದವರು ನಟಿಸಿದ್ದಾರೆ. ಸಿನಿಮಾವನ್ನು ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !