ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎ.ಟಿ ರಾಮಸ್ವಾಮಿ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.
ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ಬರೆದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ಪರಿಸರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಉಲ್ಲೇಖಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ (JDS) ತೊರೆದು ರಾಮಸ್ವಾಮಿ ಬಿಜೆಪಿ ಸೇರ್ಪಡೆಯಾಗಿದ್ದರು.

ವಿಶ್ವ ತಾಪಮಾನ ವಿಪರೀತ ಏರಿಕೆಯಿಂದಾಗಿ ಹವಾಮಾನದ ಅಸಮತೋಲನ ಉಂಟಾಗಿದೆ. ಇದರಿಂದ ನೆರೆ, ಬರ, ಚಂಡಮಾರುತ, ಭೂಕಂಪನಗಳು ಸೃಷ್ಟಿಯಾಗುತ್ತಿವೆ. ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರ ವಿಷಪೂರಿತವಾಗಿವೆ. ಬೆಟ್ಟ, ಗುಡ್ಡ, ಅರಣ್ಯಗಳ ನಾಶದಿಂದ ನದಿ, ತೊರೆಗಳೂ ಬತ್ತಿ ಹೋಗಿವೆ. ಅಂತರ್ಜಲ ಕುಸಿದಿದೆ. ಜೀವ ಸಂಕುಲಗಳಿಗೆ ಸಂಕಷ್ಟ ಬಂದೊದಗಿದೆ. ಈ ಹೊತ್ತಿನಲ್ಲಾದರೂ ನಾವು ಜನರಲ್ಲಿ ಜಾಗೃತಿ ಮೂಡಿಸಿ ಪರಿಸರ ಸಂರಕ್ಷಣೆ ಕಾರ್ಯ ಮಾಡಬೇಕಾಗಿದೆ.
ಪರಿಸರ ಉಳಿದರೆ ಜೀವ ಸಂಕುಲಗಳೂ ಉಳಿಯುತ್ತವೆ. ಈ ಸನ್ನಿವೇಶದಲ್ಲಿ ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಅತ್ಯಂತ ಮಹತ್ವವೆಂದು ಭಾವಿಸಿರುತ್ತೇನೆ. ನನ್ನ ಪೂರ್ಣ ಸಮಯವನ್ನು, ನನ್ನ ಬದುಕಿನ ಕೃಷಿಯ ಜೊತೆಗೆ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿರುತ್ತೇನೆ. ಈ ಬಗ್ಗೆ ಈಗಾಗಲೇ ನಾನು ಏ.11 ರಂದು ದೂರವಾಣಿ ಮೂಲಕ ತಮ್ಮ ಜೊತೆ ಮಾತನಾಡಿರುತ್ತೇನೆ. ಆದುದರಿಂದ ನಾನು ಭಾರತೀಯ ಜನತಾ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!