ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗುಂಡೇಟಿನಿಂದ ಮಣಿಪಾಲ್ ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಪಡೆಯುತ್ತಿರುವ ರಿಕ್ಕಿ ಆರೋಗ್ಯವನ್ನು ಡಿಕೆ ಶಿವಕುಮಾರ್ ವಿಚಾರಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡುವ ಮೊದಲೇ ರಿಕ್ಕಿ ರೈಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಆರೋಪಿಗಳು ಯಾರೇ ಆಗಿದ್ದರೂ ಪೊಲೀಸರು ಪತ್ತೆ ಹಚ್ಚುತ್ತಾರೆ. ನೀನು ಆರೋಗ್ಯದ ಕಡೆ ಗಮನ ಕೊಡು ಎಂದು ಡಿಕೆಶಿ ಪೋನ್ ಮೂಲಕ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.