ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಓಂ ಪ್ರಕಾಶ್ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಅವರ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಪತ್ನಿ ಮೇಲೆ ಶಂಕೆ?
ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಓಂ ಪ್ರಕಾಶ್ ಅವರ ಹೆಂಡತಿಯೇ ಈ ಕೊಲೆ ಮಾಡಿರುವ ಅನುಮಾನ ಕೂಡಾ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಸದ್ಯ ಶವವನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.